ಕೋಲಾರ: ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಕೋಲಾರ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2011ರಲ್ಲಿ ದಾಖಲಾಗಿದ್ದ ಮನೆ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯನ್ನು ಬರೋಬ್ಬರಿ 15 ವರ್ಷಗಳ ಬಳಿಕ ಕೆಜಿಎಫ್‌ನಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ.
ಕೆಜಿಎಫ್ ಮೂಲದ ಅಪ್ಸೆನ್ ಎಂಬಾತನೇ ಬಂಧಿತ ಆರೋಪಿ. ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಆತ ಆರೋಪಿಯಾಗಿದ್ದ. ಪೊಲೀಸರು ಕೆಜಿಎಫ್ ನಗರದ ಚಾಂಪಿಯನ್ ರಸ್ತೆಯಲ್ಲಿ ಆತನನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
PublicNext
22/04/2026 08:53 am
LOADING...