ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ವಿಷ ಸೇವಿಸಿ ಮಾಜಿ ಗ್ರಾ.ಪಂ ಸದಸ್ಯರ ದುರ್ಮರಣ

ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮಾಜಿ ಗ್ರಾ.ಪಂ ಸದಸ್ಯ ಕಾಮಶೆಟ್ಟಿ (65) ಅವರು ವಿಷ ಸೇವನೆಯಿಂದ ಮೃತಪಟ್ಟ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ಕಾಮಶೆಟ್ಟಿ ರವರು ತಮ್ಮ ಮೊಮ್ಮಗನ ಅನಾರೋಗ್ಯದಿಂದಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಂದು ವಾರದಿಂದ ಚಿಕಿತ್ಸೆ ನೀಡುತ್ತಿದ್ದರೂ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆ ಅವರು ಮನನೊಂದು ವಾಪಸ್ಸಾಗಿದ್ದರು.

ಮೈಸೂರಿನಿಂದ ತೇರಂಬಳ್ಳಿ ಬಸ್ ನಿಲ್ದಾಣಕ್ಕೆ ಬಂದ ಬಳಿಕ ಜಮೀನಿಗೆ ಬಳಸುವ ಕ್ರಿಮಿನಾಶಕವನ್ನು ಸೇವಿಸಿರುವ ಅವರು ಅಸ್ವಸ್ಥರಾಗಿದ್ದನ್ನು ಗಮನಿಸಿದ ಸ್ಥಳೀಯರು ತಕ್ಷಣ ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Edited By : Vijay Kumar
PublicNext

PublicNext

22/04/2026 11:14 am

Cinque Terre

4.55 K

Cinque Terre

0

ಸಂಬಂಧಿತ ಸುದ್ದಿ