ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಪುರಸಭೆ ಕಚೇರಿ ಎದುರಿನ ಜಾಗದಲ್ಲಿ ಹೈಟೆಕ್ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಹೆಚ್.ಸಿ.ಬಾಲಕೃಷ್ಣ ಮುಂದಾಗಿದ್ದಾರೆ. ಈ ಮಹತ್ವದ ಯೋಜನೆಗೆ ಸಿದ್ಧತೆಗಳು ನಡೆಯುತ್ತಿವೆ.
ಆದರೆ, ಆಸ್ಪತ್ರೆ ನಿರ್ಮಾಣಕ್ಕೆ ಉದ್ದೇಶಿಸಿರುವ ಸ್ಥಳದಲ್ಲಿರುವ ಮರಗಳನ್ನು ಕಡಿಯುವ ಕುರಿತು ಕೆಲವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಅರಣ್ಯ ಮತ್ತು ಪೊಲೀಸ್ ಇಲಾಖೆಗಳ ಸಹಕಾರದೊಂದಿಗೆ ವಿಶೇಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಬಹುತೇಕರು ಆಸ್ಪತ್ರೆ ನಿರ್ಮಾಣಕ್ಕೆ ಬೆಂಬಲ ಸೂಚಿಸಿದರೆ, ಕೆಲವರು ಮರಗಳ ಸಂರಕ್ಷಣೆ ದೃಷ್ಟಿಯಿಂದ ಯೋಜನೆಗೆ ವಿರೋಧ ವ್ಯಕ್ತಪಡಿಸಿದರು. ಮಾಗಡಿಯಲ್ಲಿ ಹೈಟೆಕ್ ಸರ್ಕಾರಿ ಆಸ್ಪತ್ರೆ ನಿರ್ಮಾಣದ ವಿಚಾರದಲ್ಲಿ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ನಡುವೆ ಸಂಘರ್ಷ ಉಂಟಾಗಿದ್ದು, ಜನಾಭಿಪ್ರಾಯ ಸಂಗ್ರಹ ಸಭೆಯಲ್ಲಿ ಪರ-ವಿರೋಧ ಚರ್ಚೆ ನಡೆದು ಕೆಲಕಾಲ ಮಾತಿನ ಚಕಮಕಿಗೂ ಕಾರಣವಾಯಿತು.
PublicNext
22/04/2026 11:19 am