ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ವರನಟ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ - ಗಣ್ಯರ ಸಮ್ಮುಖದಲ್ಲಿ ಗಾನಸುಧೆ

ಗದಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಏಪ್ರಿಲ್ 24 ರಂದು ಬೆಳಿಗ್ಗೆ 11 ಗಂಟೆಗೆ ವರನಟ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹಾಗೂ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ , ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಹಾವೇರಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ ಸೇರಿ ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ

Edited By : PublicNext Desk
Kshetra Samachara

Kshetra Samachara

22/04/2026 07:44 pm

Cinque Terre

5.68 K

Cinque Terre

0

ಸಂಬಂಧಿತ ಸುದ್ದಿ