ಗದಗ : ಶ್ರೀ ಭಗವಾನ ಬುದ್ಧ ಜಯಂತಿಯನ್ನು ಮೇ 1 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ ಬುದ್ಧ ಜಯಂತಿ ನಿಮಿತ್ತ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಜಯಂತಿಯ ಆಚರಣೆಗೆ ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿ.ಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಮಾಜದ ಹಿರಿಯರಿಗೆ ಸನ್ಮಾನ ಕಾರ್ಯಕ್ರಮವು ಜರುಗಲಿದೆ. ಶಿಷ್ಟಾಚಾರದನ್ವಯ ಆಮಂತ್ರಣ ಮುದ್ರಣಕ್ಕೆ ಕ್ರಮ ವಹಿಸಬೇಕು. ಭಗವಾನ ಬುದ್ಧರ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮವು ಜರುಗುವುದು.ಒಟ್ಟಾರೆಯಾಗಿ ಶ್ರೀ ಭಗವಾನ ಬುದ್ಧ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಊಟೋಪಹಾರದ ವ್ಯವಸ್ಥೆ, ವೇದಿಕೆ ವ್ಯವಸ್ಥೆ, ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು.ಈ ಸಭೆಯಲ್ಲಿ ಎಸ್.ಎನ್.ಬಳ್ಳಾರಿ, ಸತೀಶ ಹೂಲಿ, ಐ.ಕೆ. ಕಮ್ಮಾರ, ಅಂದಾನಪ್ಪ ವಿಭೂತಿ, ಸತೀಶ ಪಾಶಿ, ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ರಮೇಶ ಮಾವಿನಕಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜಕುಮಾರ ಸೊಪ್ಪಡ್ಲ, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
PublicNext
22/04/2026 07:48 pm
LOADING...