ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಪಿಕ್‌ಅಪ್ ಪಲ್ಟಿ, ಹಲವರಿಗೆ ಗಾಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ಆರನೇ ತಿರುವಿನಲ್ಲಿ ಮಂಗಳವಾರ ತಡರಾತ್ರಿ, ಪಿಕ್‌ಅಪ್ ವಾಹನ ಪಲ್ಟಿಯಾಗಿದ್ದು ಪಿಕಪ್‌ನಲ್ಲಿದ್ದ 25 ಕ್ಕೂ ಅಧಿಕ ಮಂದಿಯಲ್ಲಿ ಹೆಚ್ಚಿನವರು ಗಂಭೀರ ಗಾಯಗೊಂಡಿದ್ದಾರೆ.

ವಾಹನದಲ್ಲಿ ಆಂಧ್ರಪ್ರದೇಶ ಹಾಗೂ ಬಳ್ಳಾರಿ ಮೂಲದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಪರಿಣಾಮವಾಗಿ ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ತಕ್ಷಣ ರಕ್ಷಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಗಂಭೀರವಾಗಿ ಗಾಯಗೊಂಡ ಹತ್ತು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಚಾರ್ಮಾಡಿ ಹಸನಬ್ಬ ಅವರ ತಂಡ, ರಾಜ್ಯೋತ್ಸವ ಸೇವಾ ಆ್ಯಂಬುಲೆನ್ಸ್, ಎಸ್‌ಕೆಎಸ್ಎಸ್ಎಫ್ ಕಕ್ಕಿಂಜೆ ಆ್ಯಂಬುಲೆನ್ಸ್, ರಿಕ್ಷಾಗಳು ಹಾಗೂ ಖಾಸಗಿ ಕಾರುಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Edited By :
PublicNext

PublicNext

22/04/2026 10:53 pm

Cinque Terre

21.05 K

Cinque Terre

0

ಸಂಬಂಧಿತ ಸುದ್ದಿ