ಮಡಿಕೇರಿ: ಆಟೋ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಲ್ದಾರೆ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ನಡೆದಿದೆ.
ಅಂಚೆತಿಟ್ಟು ಹಾಡಿಯ ನಿವಾಸಿ ವೈ.ಎನ್.ಮಾದ ಮೃತ ಚಾಲಕನಾಗಿದ್ದು, ಸುನಿಲ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಾಲಕ ಮಾದ ಅವರ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ತೀವ್ರತೆಗೆ ವೈ.ಎನ್.ಮಾದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
PublicNext
23/04/2026 06:34 am
LOADING...