ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ: ಕಾರ್, ಬೈಕ್ ಭೀಕರ ಅಪಘಾತ - ಸವಾರ ಸಾವು, ಚಾಲಕ ಪರಾರಿ

ಬಳ್ಳಾರಿ: ಜಿಲ್ಲೆಯ ಗೋನಾಳ್ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಾದ ಸೂರಿ (32) ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಸಂಜೀವರಾಯನಕೋಟೆ ಗ್ರಾಮದಲ್ಲಿ ವಿವಾಹವಾಗಿದ್ದ ಸೂರಿ ಅವರು ತಮ್ಮ ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ, ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ತೀವ್ರತೆಗೆ ಸೂರಿ ಅವರಿಗೆ ಯಾವುದೇ ರಕ್ಷಣೆ ಸಿಗದೇ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆ ನಂತರ ಕಾರು ಚಾಲಕ ಪರಾರಿಯಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ಚಾಲಕನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಈ ದುರ್ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Edited By : Somashekar
PublicNext

PublicNext

23/04/2026 11:27 am

Cinque Terre

13.44 K

Cinque Terre

0

ಸಂಬಂಧಿತ ಸುದ್ದಿ