ಉಡುಪಿ: ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣ ಸಮೀಪದ ಶಾಂಭವಿ ವಸತಿ ಗೃಹದ ಬಳಿ ಕುಸಿದುಬಿದ್ದು ವ್ಯಕ್ತಿಯೊಬ್ಬರು, ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಈ ವ್ಯಕ್ತಿ ರಸ್ತೆ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಗ್ಗೆ ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಆ ವ್ಯಕ್ತಿಯನ್ನು ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ಖಚಿತಪಡಿಸಿದರು. ಮೃತರ ವೈಯಕ್ತಿಕ ವಿವರ ಇನ್ನಷ್ಟೇ ಗೊತ್ತಾಗಬೇಕಿದೆ. ಮೃತ ವ್ಯಕ್ತಿಗೆ 60 ವರ್ಷ ಪ್ರಾಯ ಅಂದಾಜಿಸಲಾಗಿದೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
Kshetra Samachara
23/04/2026 12:39 pm
LOADING...