ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ : ಸಾರಿಗೆ ಚಾಲಕನ ಯಡವಟ್ಟಿಗೆ ಬಲಿಯಾದ ವ್ಯಕ್ತಿ

ಹೊಸಪೇಟೆ : ಸಾರಿಗೆ ಬಸ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹರಿಹರ ರಸ್ತೆಯ ಗುರು ಪಿಯು ಕಾಲೇಜು ಬಳಿ ನಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಮೃತ ವ್ಯಕ್ತಿಯ ಗುರುತನ್ನ ಪತ್ತೆ ಹಚ್ಚಲು ಹೊಸಪೇಟೆ ಸಂಚಾರಿ ಠಾಣೆಯ ಪೊಲೀಸರು ಮುಂದಾಗಿದ್ದಾರೆ.

ಮೃತ ವ್ಯಕ್ತಿಯ ಹೆಸರು ಯಾರಂತ ಗೊತ್ತಾಗದೇ ಇರೋದ್ರಿಂದ ಮೃತ ದೇಹವನ್ನ ಹೊಸಪೇಟೆ ಸಂಚಾರ ಠಾಣೆ ಪೊಲೀಸರು ತಾವೇ ಶವಗಾರಕ್ಕೆ ಶಿಫ್ಟ್ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ವಿಜಯನಗರ ಎಸ್‌ಪಿ ಜಾಹ್ನವಿ, ಸಂಚಾರ ಪೊಲೀಸ್ ಠಾಣೆ ಪಿಐ ಹುಲುಗಪ್ಪ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದು, ಹೊಸಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Edited By : Somashekar
PublicNext

PublicNext

23/04/2026 06:50 pm

Cinque Terre

12.39 K

Cinque Terre

0

ಸಂಬಂಧಿತ ಸುದ್ದಿ