ನಂಜನಗೂಡು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದರೂ ಅಂಕ ಕಡಿಮೆ ಬಂದಿದೆ ಎಂಬ ಕಾರಣದಿಂದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದ ಮಂಜು, ಸವಿತಾ ದಂಪತಿಗಳ ಪುತ್ರಿ ತ್ರಿಶಾಲ ಮೃತ ಬಾಲಕಿ. ಇವಳು ನಂಜನಗೂಡು ನಗರದ ಶ್ರೀ ಗುರುಮಲ್ಲೇಶ್ವರ ಖಾಸಗಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದಳು.
ಇಂದು ಪ್ರಕಟವಾದ ಫಲಿತಾಂಶದಲ್ಲಿ ತ್ರಿಶಾಲ 440 ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಳು.
ಆದರೆ, ತಾನು ಡಿಸ್ಟಿಂಕ್ಷನ್ ಮಟ್ಟದಲ್ಲಿ ಬರೆದಿದ್ದೇನೆ ಎಂದು ನಿರೀಕ್ಷಿಸಿದ್ದ ಬಾಲಕಿ, ಬಂದ ಅಂಕಗಳನ್ನು ಕಡಿಮೆ ಎಂದು ಭಾವಿಸಿ ಮನನೊಂದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾಳೆ. ಈ ದುರ್ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ.
PublicNext
23/04/2026 07:28 pm
LOADING...