ಶಿರಸಿ: ಕಾಡುಪ್ರಾಣಿಗಳ ಹಾವಳಿಯಿಂದ ತಮ್ಮ ಬೆಳೆಗಳು ನಾಶವಾಗುತ್ತಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಶಿರಸಿ ತಾಲೂಕಿನ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವು ಬಾರಿ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿರಸಿ ತಾಲೂಕಿನ ದೇವನಳ್ಳಿ ಗ್ರಾಮದಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿ ಮೀರಿದೆ. ರೈತರು ಕಷ್ಟಪಟ್ಟು ಬೆಳೆದ ಬಹುವಾರ್ಷಿಕ ಬೆಳೆಗಳಾದ ಅಡಿಕೆ, ಬಾಳೆ, ಏಲಕ್ಕಿ ಮತ್ತು ಮೆಣಸು ಸಂಪೂರ್ಣವಾಗಿ ನಾಶವಾಗುತ್ತಿವೆ. ವನ್ಯ ಪ್ರಾಣಿಗಳಿಂದ ಬೆಳೆ ರಕ್ಷಣೆ ಮಾಡಿಕೊಳ್ಳುವುದು ರೈತರಿಗೆ ಯಕ್ಷಪ್ರಶ್ನೆಯಾಗಿ ಕಾಡುತ್ತಿದ್ದು, ನಾಲ್ಕೈದು ವರ್ಷ ಬೆಳೆದು ನಿಂತ ಅಡಿಕೆ ಮರಗಳನ್ನು ಕಾಡುಪ್ರಾಣಿಗಳು ತಿಂದು ಬುಡಸಮೇತ ಕಿತ್ತುಹಾಕುತ್ತಿರುವುದು ರೈತರ ಅಳಲು ಹೇಳತೀರದಾಗಿದೆ.
ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಇಲಾಖೆಯು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ಆರೋಪಿಸಿದ್ದಾರೆ. ದೇವನಳ್ಳಿ ರೈತರಾದ ಶಾಂತಾರಾಮ ಧಿವೇಕರ ಅವರು, ಅರಣ್ಯ ಇಲಾಖೆಯು ಅತೀ ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಂಡು ವನ್ಯಪ್ರಾಣಿ ಹಾವಳಿಯನ್ನು ನಿಯಂತ್ರಿಸಬೇಕು ಹಾಗೂ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
Kshetra Samachara
23/04/2026 09:52 pm
LOADING...