ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಅಧಿಕಾರಿಗಳ ನಡೆ ಗ್ರಾಮದ ಕಡೆ!

ದಾವಣಗೆರೆ: ಜಗಳೂರು ತಾಲೂಕಿನ ಉಚ್ಚಂಗಿಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಗಿತ್ತೆ ಮಾಧವ್ ವಿಠಲ್ ರಾವ್ ಅವರು ಬೆಳಗಿನ ನಡೆ ಗ್ರಾಮಗಳ ಕಡೆ ಕಾರ್ಯಕ್ರಮದ ಅಂಗವಾಗಿ ಅಧಿಕಾರಿಗಳೊಂದಿಗೆ ಇಂದು ಉಚ್ಚಂಗಿಪುರ ಗ್ರಾಮಕ್ಕೆ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ಸ್ಥಿತಿಯನ್ನು ಪರಿಶೀಲಿಸಿದರು.

ಭೇಟಿ ವೇಳೆ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಗ್ರಾಮಸ್ಥರೊಂದಿಗೆ ನೆಲದ ಮೇಲೆಯೇ ಕುಳಿತು ಅವರ ಕುಂದುಕೊರತೆಗಳನ್ನು ಆಲಿಸಿದರು. ಪ್ರಸ್ತುತ ಗ್ರಾಮಕ್ಕೆ ಆರು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಪರಿಸ್ಥಿತಿಯನ್ನು ಮನಗಂಡು ಪ್ರತಿದಿನ 10 ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Edited By : Nagaraj Tulugeri
Kshetra Samachara

Kshetra Samachara

24/04/2026 10:45 am

Cinque Terre

21.35 K

Cinque Terre

0

ಸಂಬಂಧಿತ ಸುದ್ದಿ