ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರದಲ್ಲಿ ಚಿರತೆ ಓಡಾಟ - ಜನರಲ್ಲಿ ಆತಂಕ!

ಕೋಲಾರ - ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಸಿಂಗ್ಗೇಹಳ್ಳಿ ಗ್ರಾಮದ ಹೊರವಲಯದಲ್ಲಿ, ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ಎರಡು ಬಾರಿ ಚಿರತೆಯನ್ನ ಗ್ರಾಮಸ್ಥರು ನೋಡಿದ್ದಾರೆ.

ಚಿರತೆಯನ್ನು ಓಡಿಸುವ ದೃಷ್ಟಿಯಿಂದ ಗ್ರಾಮಸ್ಥರು ಪಟಾಕಿ ಸಿಡಿಸಿ, ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಕಾಣಿಸಿಕೊಂಡ ಪ್ರದೇಶದಲ್ಲಿ, ಚಿರತೆ ಸೆರೆ ಹಿಡಿಯಲು ಒತ್ತಾಯಿಸಿದ್ದಾರೆ. ಅಧಿಕಾರಿಗಳ ಬಳಿ ಬೋನು ಇರಿಸಲು ಸಿಂಗ್ಗೇಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Edited By : Nagaraj Tulugeri
PublicNext

PublicNext

24/04/2026 11:05 am

Cinque Terre

6.49 K

Cinque Terre

0