ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಪ್ರಜಾಪ್ರಭುತ್ವಕ್ಕೆ ಕತ್ತರಿ: ಸ್ಥಳೀಯ ಚುನಾವಣೆ ನಡೆಸದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮಡಿಕೇರಿ: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು.

ಮಡಿಕೇರಿ ತಾ.ಪಂ ಕಚೇರಿ ಎದುರು ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ತಕ್ಷಣ ಚುನಾವಣೆ ನಡೆಸುವಂತೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ ಚುನಾವಣೆ ನಡೆಸದ ಕಾಂಗ್ರೆಸ್ ಸರಕಾರ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದರಿಂದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಕ್ಷೇತ್ರಗಳಿಗೆ ಅನುದಾನ ಸಮರ್ಪಕವಾಗಿ ಹಂಚಿಕೆಯಾಗದೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಆರೋಪಿಸಿದರು.

ಹೊರಗಿನಿಂದ ಬಂದ ಅಧಿಕಾರಿಗಳಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಮಾಹಿತಿ ಇರುವುದಿಲ್ಲ, ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರದಲ್ಲಿದ್ದರೆ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತದೆ. ಆದ್ದರಿಂದ ಸರಕಾರ ಶೀಘ್ರ ಚುನಾವಣೆಯನ್ನು ನಡೆಸಿ ಜನರಿಗೆ ಅಧಿಕಾರವನ್ನು ನೀಡಬೇಕೆಂದು ಒತ್ತಾಯಿಸಿದರು.

Edited By : PublicNext Desk
Kshetra Samachara

Kshetra Samachara

24/04/2026 02:49 pm

Cinque Terre

280

Cinque Terre

0