ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಾ. ರಾಜ್ ಕುಮಾರ್ ಕನ್ನಡ ನಾಡಿನ ಧ್ರುವತಾರೆ - ಪಿ. ಕಲಾವತಿ

ಮಡಿಕೇರಿ:ಕರ್ನಾಟಕ ರತ್ನ, ಪದ್ಮಭೂಷಣ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕøತರಾದ ಡಾ.ರಾಜ್ ಕುಮಾರ್ ಅವರು ಕನ್ನಡ ನಾಡು, ನುಡಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಡಾ.ರಾಜ್ ಕುಮಾರ್ ಅವರ 97 ನೇ ಜನ್ಮ ದಿನಾಚರಣೆ ಹಾಗೂ ಡಾ.ರಾಜ್‍ಕುಮಾರ್ ಅವರ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಡಾ.ರಾಜ್ ಕುಮಾರ್ ಅವರು ಗೋಕಾಕ್ ಚಳುವಳಿ ಮೂಲಕ ಕನ್ನಡ ನಾಡಿನಲ್ಲಿ ಹೊಸ ಅಲೆ ಸೃಷ್ಟಿಸಿ, ಕನ್ನಡ ನಾಡು, ನುಡಿ, ಭಾಷೆ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.

ಡಾ.ರಾಜ್ ಕುಮಾರ್ ಕನ್ನಡ ಚಿತ್ರರಂಗದ ಧ್ರುವತಾರೆಯಾಗಿ ಮೆರೆದಿದ್ದಾರೆ. ನಟ ಸಾರ್ವಭೌಮ ಮತ್ತು ಖ್ಯಾತ ಹಿನ್ನೆಲೆ ಗಾಯಕರಾಗಿ ಚಲನಚಿತ್ರ ರಂಗದಲ್ಲಿ ಬೆಳಕು ಚೆಲ್ಲಿದ್ದಾರೆ ಎಂದು ನಗರಸಭೆ ಅಧ್ಯಕ್ಷರು ನುಡಿದರು.

Edited By : PublicNext Desk
Kshetra Samachara

Kshetra Samachara

24/04/2026 09:07 pm

Cinque Terre

460

Cinque Terre

0