ಭಟ್ಕಳ: ಮುರ್ಡೇಶ್ವರದ ಮಾತೋಬಾರ ದೇವಸ್ಥಾನ ಸಮೀಪದ ಬೀಚ್‌ನಲ್ಲಿ ಸಾರ್ವಜನಿಕವಾಗಿ ಗಾಂಜಾ ಸೇವನೆ ಮಾಡುತ್ತಿದ್ದಾನೆಂಬ ಆರೋಪದ ಮೇಲೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಹಿರೇದೊಮ್ಮಿ, ಮಾವಳ್ಳಿ-01 ನಿವಾಸಿ ಮೊಹಮ್ಮದ್ ಕೈಫ್ (20) ಎಂದು ಗುರುತಿಸಲಾಗಿದೆ.
ಮುರ್ಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಹಣಮಂತ ಬಿರಾದಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿತನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿತನನ್ನು ಬಳಿಕ ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಗಾಂಜಾ ಸೇವನೆ ಪಾಸಿಟಿವ್ ಎಂದು ದೃಢಪಟ್ಟಿದೆ.
ಈ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.
Kshetra Samachara
24/04/2026 09:52 pm
LOADING...