ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ತಡರಾತ್ರಿ ಬೃಹತ್ ಮೊಸಳೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತು. ಕೃಷ್ಣಾ ನದಿಯಿಂದ ದಾರಿ ತಪ್ಪಿ ಕೃಷಿ ಜಮೀನಿಗೆ ನುಗ್ಗಿದ ಮೊಸಳೆ, ಸ್ಥಳೀಯರ ಗಮನಕ್ಕೆ ಬಂದ ತಕ್ಷಣ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಮಾಹಿತಿ ಪಡೆದ ಅಥಣಿ ಅರಣ್ಯ ಇಲಾಖೆ ಸಿಬ್ಬಂದಿ ನಸುಕಿನ ಜಾವ ಸ್ಥಳಕ್ಕೆ ಧಾವಿಸಿ, ಗ್ರಾಮಸ್ಥರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಪ್ರಯತ್ನದ ಬಳಿಕ ಬೃಹತ್ ಮೊಸಳೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.
ನಂತರ ಮೊಸಳೆಯನ್ನು ಹಿಡಕಲ್ ಜಲಾಶಯದ ಹಿನ್ನೀರಿನ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದ್ದು, ಗ್ರಾಮದಲ್ಲಿ ಉಂಟಾದ ಆತಂಕಕ್ಕೆ ತೆರೆ ಬಿದ್ದಿದೆ.
ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಯ ತ್ವರಿತ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
25/04/2026 08:15 am
LOADING...