ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ನಾಸಿಕ್ ಟಿ ಸಿ ಎಸ್ ಘಟನೆ ಖಂಡಿಸಿ ಪ್ರತಿಭಟನೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು: ​ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯಲ್ಲಿ ಮಹಿಳಾ ಉದ್ಯೋಗಿಗಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ಮತಾಂತರ ಯತ್ನವನ್ನು ಖಂಡಿಸಿ ಚಿಕ್ಕಮಗಳೂರು ನಗರದಲ್ಲಿ ಬೃಹತ್ ನಡೆಯಿತು. ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ನಗರದ ಪ್ರಮುಖ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಘಟನೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.​ ಘಟನೆಯಲ್ಲಿ ಭಾಗಿಯಾಗಿರುವ ಮಾಸ್ಟರ್ ಮೈಂಡ್ ತೌಸಿಫ್ ಅತ್ತಾರ್ ಮತ್ತು ಇತರ ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾರ್ಪೊರೇಟ್ ವಲಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಇಂತಹ 'ಲವ್ ಜಿಹಾದ್' ಮತ್ತು ಮತಾಂತರದ ಜಾಲಗಳು ಕಂಪನಿಗಳ ಒಳಗೆ ಹರಡುತ್ತಿರುವುದು ಆತಂಕಕಾರಿ ವಿಷಯ ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

25/04/2026 05:08 pm

Cinque Terre

900

Cinque Terre

0

ಸಂಬಂಧಿತ ಸುದ್ದಿ