ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಚಿವ ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ - ಶೀಘ್ರ ಗುಣಮುಖರಾಗಲು ಹಾರೈಕೆ

ಬೆಂಗಳೂರು: ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕೃಷ್ಣ ಆರೋಗ್ಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ಸಚಿವ ಡಿ. ಸುಧಾಕರ್ ಅವರ ಆರೋಗ್ಯವನ್ನು ವಿಚಾರಿಸಿದರು.

ಮುಖ್ಯಮಂತ್ರಿಗಳು ಸಚಿವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಅಲ್ಲದೆ, ಸಚಿವರ ಕುಟುಂಬದ ಸದಸ್ಯರೊಂದಿಗೂ ಮಾತನಾಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹಾಗೂ ಮಾಯಕೊಂಡ ಶಾಸಕ ಬಸವಂತಪ್ಪ ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

25/04/2026 07:59 pm

Cinque Terre

7.6 K

Cinque Terre

0

ಸಂಬಂಧಿತ ಸುದ್ದಿ