ಶಿವಮೊಗ್ಗ : ಗಾಂಜಾ ಮಾರಾಟ ಮಾಡ್ತಿದ್ದ ಐವರನ್ನ ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಬರೋಬ್ಬರಿ 4.5 ಕೆಜಿಗೂ ಹೆಚ್ಚು ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುವ ಎನ್ ಹೆಚ್ 369 ಬೈಪಾಸ್ ರಸ್ತೆಯಲ್ಲಿ ಕಾನೂನುಬಾಹಿರವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹೊಳೆಹೊನ್ನೂರು ಪಿಐ ಶಿವಪ್ರಸಾದ್ ನೇತೃತ್ವದ ತಂಡ ದಾಳಿ ನಡೆಸಿದೆ.
ಲವ, ಲೇಖಕ್, ಮನೋಜ, ಕಿರಣ, ಗಿರೀಶ ಬಂಧಿತ ಆರೋಪಿಗಳು..
ಬಂಧಿತರಿಂದ 2,34,000 ರೂ ಮೌಲ್ಯದ 4 ಕೆಜಿ 690ಗ್ರಾಂ ತೂಕದ ಗಾಂಜಾವನ್ನು ಹಾಗೂ ಕೃತ್ಯಕ್ಕೆ ಬಳಸಿದ ಹೋಂಡಾ ಆಕ್ಟೀವಾ ಮೋಟಾರ್ ಬೈಕ್ ವಶಕ್ಕೆ ಪಡೆಯಲಾಗಿದೆ.
Kshetra Samachara
25/04/2026 08:50 pm
LOADING...