ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಹೊತ್ತಿ ಉರಿದ ಆಸ್ಪತ್ರೆ

ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಾಸ್ಪತ್ರೆಗೆ ಬೆಂಕಿ‌ ಬಿದ್ದ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದ ಪರಿಣಾಮ ಆಸ್ಪತ್ರೆಯ‌ ಎರಡನೇ ಮಹಡಿ ಧಗಧಗನೆ ಹೊತ್ತಿ ಉರಿದಿದೆ.

ಕೋಟ್ಯಾಂತರ ರೂಪಾಯಿ ಮೌಲ್ಯದ ಔಷಧಿ ಮತ್ತು ವಸ್ತುಗಳು ಸುಟ್ಟು ಭಸ್ಮವಾಗಿವೆ. ಸುಮಾರು 40 ಲಕ್ಷ ಮೌಲ್ಯದ ಔಷಧಿ ,50 ಲಕ್ಷ ರೂಪಾಯಿ ಮೌಲ್ಯದ ಮಾತ್ರೆಗಳು, ವೈದ್ಯಕೀಯ ಉಪಕರಣಗಳು ಸೇರಿದಂತೆ ಸುಮಾರು ಒಂದು ಕೋಟಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಪತ್ರೆಯಲ್ಲಿರುವ ಯಾವುದೇ ರೋಗಿಗಳಿಗೆ ತೊಂದರೆಯಾಗಿಲ್ಲ.

Edited By :
PublicNext

PublicNext

25/04/2026 09:06 pm

Cinque Terre

26.69 K

Cinque Terre

0

ಸಂಬಂಧಿತ ಸುದ್ದಿ