ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ: ಗದಗದಲ್ಲಿ ಭವ್ಯ ಆಚರಣೆಗೆ ಕ್ಷಣಗಣನೆ!

ಗದಗ: ಮೇ 10 ರಂದು ನಗರದ ಕೆ.ಎಚ್. ಪಾಟೀಲ ಸಭಾ ಭವನದಲ್ಲಿ ನಡೆಯಲಿರುವ ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್‌ ಕೆ.ಆರ್. ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಯಂತಿ ನಿಮಿತ್ತ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಜಯಂತಿಯನ್ನು ಆಚರಿಸಲು ಕ್ರಮ ವಹಿಸಬೇಕು. ಅಲ್ಲದೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯಿತಿ, ಶಾಲಾ ಕಾಲೇಜುಗಳಲ್ಲಿಯೂ ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಬೇಕು ಎಂದು ಸೂಚಿಸಿದರು. ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ, ಪದವಿಯಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಮಾಜದ ಹಿರಿಯರಿಗೆ ಈ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗುವುದು ಎಂದು ಡಾ. ದುರಗೇಶ್‌ ತಿಳಿಸಿದರು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸುವಂತೆಯೂ ಅವರು ಸೂಚಿಸಿದರು.

ಸಭೆಯಲ್ಲಿ ಊಟೋಪಹಾರ, ವೇದಿಕೆ ವ್ಯವಸ್ಥೆ, ವೇದಿಕೆ ಅಲಂಕಾರ, ಬ್ಯಾನರ್‌ ಅಳವಡಿಕೆ, ಪುಸ್ತಕ ಬಿಡುಗಡೆ ಕುರಿತು ಚರ್ಚೆ ನಡೆಸಲಾಯಿತು. ಡಿ.ವೈ.ಎಸ್.ಪಿ. ಮಹಾಂತೇಶ್ ಸಜ್ಜನ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀಕ್ಷಕರು ರಾಜಕುಮಾರ ಸೊಪ್ಪಡ್ಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/04/2026 09:58 pm

Cinque Terre

6.72 K

Cinque Terre

0