ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆದ ವಿದೇಶಿ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಂಸ್ಟೇ ಮಾಲೀಕ ವಿಶಾಲ್ ಪೊನ್ನಪ್ಪ ಅವರ ಜಾಮೀನು ಅರ್ಜಿ ವಜಾಗೊಂಡಿದೆ.
ವಿಶಾಲ್ ಪೊನ್ನಪ್ಪ ಮಾಲೀಕತ್ವದ ದೇವಿ ವಿಲ್ಲಾ ಹೋಂಸ್ಟೇಗೆ ಇತ್ತೀಚೆಗೆ ಆಗಮಿಸಿದ್ದ ಅಮೆರಿಕಾ ಮೂಲದ ಮಹಿಳೆಗೆ ಅಲ್ಲಿನ ಸಿಬ್ಬಂದಿ ವೃಜೇಶ್ ಕುಮಾರ್ ಮತ್ತು ಬರುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿತ್ತು. ಅಲ್ಲದೆ, ಹೋಂಸ್ಟೇ ಮಾಲೀಕ ವಿಶಾಲ್ ಪೊನ್ನಪ್ಪ ವೈಫೈ ಸಂಪರ್ಕ ಕಡಿತಗೊಳಿಸುವ ಮೂಲಕ ವಿದೇಶಿ ಮಹಿಳೆ ಯಾರನ್ನೂ ಸಂಪರ್ಕಿಸದಂತೆ ಮಾಡಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ಮಾಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು.
ಪ್ರಕರಣ ಸಂಬಂಧ ಕೊಡಗು ಜಿಲ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ಆರೋಪಿಗಳನ್ನು ಮೇ ೩ರವರೆಗೆ ನ್ಯಾಯಾಂಗ ಬಂಧನದಲ್ಲಿಡಲು ಆದೇಶಿಸಲಾಗಿತ್ತು. ಈ ನಡುವೆ ಹೋಂಸ್ಟೇ ಮಾಲೀಕ ವಿಶಾಲ್ ಪೊನ್ನಪ್ಪ ವಿರಾಜಪೇಟೆ ವಿಶೇಷ ನ್ಯಾಯಾಲಯದಲ್ಲಿ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಮೇ 28ಕ್ಕೆ ವಿಚಾರಣೆಯನ್ನು ಮುಂದೂಡಿದೆ.
Kshetra Samachara
26/04/2026 06:52 am
LOADING...