ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಪ್ರವೇಶದ 50ನೇ ವರ್ಷದ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಚಿತ್ರದುರ್ಗ ಸಜ್ಜಾಗಿದೆ. ನಗರ ಹೊರವಲಯದ ಮಾದರ ಚೆನ್ನಯ್ಯ ಮಠದ ಪಕ್ಕದ ಆವರಣದಲ್ಲಿ ನಡೆಯಲಿರುವ ಈ ಬೃಹತ್ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಭಾನುವಾರ ನಡೆಯಲಿರುವ ಭೂಮಿ ಪೂಜೆ ಹಿನ್ನೆಲೆಯಲ್ಲಿ, ಕಾರ್ಯಕ್ರಮ ಪೂರ್ವ ತಯಾರಿಯನ್ನು ಪರಿಶೀಲಿಸಲು ಮಾಜಿ ಶಾಸಕ ಜಿ. ಹೆಚ್. ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಮಾಜಿ ಜಿಲ್ಲಾಧ್ಯಕ್ಷ ಮುರಳಿ ಹಾಗೂ ಲಿಂಗಮೂರ್ತಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾನುವಾರ ಬೆಳಗ್ಗೆ ನಡೆಯುವ ಭೂಮಿ ಪೂಜೆಗಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಸಂಸದ ಬಿ. ವೈ. ರಾಘವೇಂದ್ರ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಸಾಧನೆಗಳನ್ನು ಅನಾವರಣಗೊಳಿಸಲಾಗುವುದು.
PublicNext
26/04/2026 07:38 am
LOADING...