ಚಿಕ್ಕಮಗಳೂರು: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಸ್ಲಿಂ ಸಮುದಾಯದ ಬಗ್ಗೆ ಒಲವು ತೋರಿ ಮಾತನಾಡಿರುವುದನ್ನು ಸ್ವಾಗತಿಸಿರುವ ರಾಜ್ಯ ಕಿಸಾನ್ ಸೆಲ್ ವಕ್ತಾರ ಹಾಗೂ ಚಿಕ್ಕಮಗಳೂರು ಜಿಲ್ಲಾ ಮುಸ್ಲಿಂ ಮುಖಂಡ ಸಿ.ಎನ್. ಅಕ್ಮಲ್, ಬಿಜೆಪಿಯ ಈ ಹಠಾತ್ ಬದಲಾವಣೆಯ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ್ದಾರೆ.
ದಿನ ಬೆಳಗಾದರೆ ಮುಸ್ಲಿಮರ ವಿರುದ್ಧ ಮಾತನಾಡುವ ಬಿಜೆಪಿ ನಾಯಕರು ಇಂದು ಸಮುದಾಯಕ್ಕೆ ಬುದ್ಧಿ ಹೇಳುವ ಕೆಲಸ ಮಾಡುತ್ತಿರುವುದು ಆಶ್ಚರ್ಯ ತಂದಿದೆ ಎಂದಿರುವ ಅವರು, ಬಿಜೆಪಿಗೆ ನಿಜವಾಗಿಯೂ ಮುಸ್ಲಿಮರ ಮೇಲೆ ಕಾಳಜಿ ಇದ್ದರೆ ರಾಜ್ಯದ 29 ಜಿಲ್ಲೆಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುತ್ತೀರಾ? ಎಂದು ಸವಾಲು ಹಾಕಿದ್ದಾರೆ.
ರಾಜಕೀಯ ಲಾಭಕ್ಕಾಗಿ ಒಂದು ಕಡೆ ಮುಸ್ಲಿಮರನ್ನು 'ಪಂಚರ್ ಹಾಕುವವರು' ಎಂದು ಹೀಯಾಳಿಸಿ, ಮತ್ತೊಂದೆಡೆ ಅಬ್ದುಲ್ ಕಲಾಂ ಅವರಂತಹ ಮಹನೀಯರು ತಂದುಕೊಟ್ಟ ಕೀರ್ತಿಯನ್ನು ಮರೆತು ರಾಜಕಾರಣ ಮಾಡುವುದು ಸರಿಯಲ್ಲ ಎಂದು ಅಕ್ಮಲ್ ಕಿಡಿಕಾರಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ರಕ್ಷಣೆ ನೀಡುತ್ತಿರುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ನಾವು ಕಾಂಗ್ರೆಸ್‌ನಲ್ಲೇ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
PublicNext
26/04/2026 07:49 am
LOADING...