ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಸಚಿವ ಡಾ. ಜಿ. ಪರಮೇಶ್ವರ ಚಾಲನೆ

ತುಮಕೂರು: ಕೃಷಿ ಚಟುವಟಿಕೆಯಲ್ಲಿ ವೈಜ್ಞಾನಿಕ ತಂತ್ರಜ್ಞಾನ ಬಳಸಿಕೊಳ್ಳುವ ಸಂಬಂಧ ಕೃಷಿ ಇಲಾಖೆ ಹಮ್ಮಿಕೊಂಡಿರುವ ಕೃಷಿ ಅಭಿಯಾನದ ಮಾಹಿತಿ ರಥವನ್ನು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಜಿಲ್ಲಾ ಪಂಚಾಯ್ತಿಯಲ್ಲಿ ಚಾಲನೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಮುಖವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ಸಮಯದಲ್ಲಿ ವೈಜ್ಞಾನಿಕ ಪದ್ಧತಿಯನ್ನು ಅನುಸರಿಸಿ ಉಳುಮೆ ಮಾಡುವುದು ಸೇರಿದಂತೆ ವಿವಿಧ ಯೋಜನೆಗಳ ಕುರಿತು ಜಿಲ್ಲಾವ್ಯಾಪಿ ಮಾಹಿತಿ ನೀಡಲಾಗುತ್ತಿದೆ.

ಮಾಗಿ ಉಳುಮೆ, ಉತ್ತಮ ಬಿತ್ತನೆ ಬೀಜ ಬಿತ್ತನೆ, ಬೀಜೋಪಚಾರ, ಬೆಳೆ ಪರಿವರ್ತನೆ, ಅಂತರ ಬೆಳೆ ಪದ್ಧತಿ, ಕೊಟ್ಟಿಗೆ ಗೊಬ್ಬರ, ಎರೆ ಗೊಬ್ಬರ, ಹಸಿರೆಲೆ ಗೊಬ್ಬರ, ಜೀವಾಮೃತ, ಸಮತೋಲನ ಗೊಬ್ಬರ ಬಳಕೆ, ಸಮಗ್ರ ಪೋಷಕಾಂಶ ನಿರ್ವಹಣೆ, ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿಎಪಿ, ರಸಗೊಬ್ಬರಗಳ ಬಳಕೆ ಹಾಗೂ ಯೂರಿಯಾ ವಿತರಣೆ ಸೇರಿದಂತೆ ವಿವಿಧ ಮಾಹಿತಿಗಳನ್ನು ರೈತರಿಗೆ ನೀಡಲಾಗುತ್ತಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷಣ್ ಅವರು ತಿಳಿಸಿದ್ದಾರೆ.

ಅಲ್ಲದೆ, ಕೃಷಿ ಹೊಂಡಗಳ ನಿರ್ಮಾಣ ಹಾಗೂ ನಿರ್ವಹಣೆ ಬಗ್ಗೆ ಜಿಲ್ಲೆಯ ಹತ್ತು ತಾಲೂಕುಗಳಲ್ಲಿ ಪ್ರಚಾರ ಮಾಹಿತಿ ರಥದ ಮುಖಾಂತರ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಪ್ರಚಾರ ಕೈಗೊಂಡು ರೈತರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕೃಷಿ ಇಲಾಖೆ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಷಡಕ್ಷರಿ, ರಮೇಶ್ ಬಾಬು, ಡಿ.ಟಿ. ಶ್ರೀನಿವಾಸ, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಅಶ್ವಿಜ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/04/2026 07:52 am

Cinque Terre

980

Cinque Terre

0

ಸಂಬಂಧಿತ ಸುದ್ದಿ