ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಇಬ್ಬರಿಗೆ ಕಾಲು ಮುರಿತ

ಶಿಡ್ಲಘಟ್ಟ : ದಿಬ್ಬೂರಳ್ಳಿ ರಸ್ತೆಯಿಂದ ಶಿಡ್ಲಘಟ್ಟ ಕಡೆಗೆ ಬರುತ್ತಿದ್ದ ದ್ವಿಚಕ್ರವಾಹನಗಳಿಗೆ ಶಿಡ್ಲಘಟ್ಟದಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿ ಕಾಲು ಮುರಿದಿದೆ. ಇನ್ನುಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣವೇ ಗಾಯಾಳುಗಳನ್ನ ಶಿಡ್ಲಘಟ್ಟ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ತಾಲೂಕಿನ ಮಲ್ಲಹಳ್ಳಿ ಗ್ರಾಮದ ಬಳಿ ಶನಿವಾರ ಸಂಜೆ 7 ಗಂಟೆ ಸಮಯದಲ್ಲಿ ಈ ಅಪಘಾತ ನಡೆದಿದ್ದು, ಅಪಘಾತದಲ್ಲಿ ಚಿಕ್ಕತೇಕಹಳ್ಳಿ ಗ್ರಾಮದ ಯುವಕ ಎನ್ ಅಶೋಕ್ ಹಾಗೂ ಅನಿಲ್ ಎಂಬುವರಿಗೆ ಕಾಲು ಮುರಿದಿದೆ. ಶಶಿಕುಮಾರ್ ಹಾಗೂ ಅನಿಲ್ ಕುಮಾರ್ ಅವರಿಗೆ ಸಣ್ಣ ಗಾಯಗಳಾಗಿ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ತಾಲ್ಲೂಕಿನ ಗೊರಮಡಗು ಗ್ರಾಮದ ಬಾಬು ಎಂಬ ಚಾಲಕ ಶಿಡ್ಲಘಟ್ಟದಿಂದ ಕಾರನ್ನ ಅತಿ ವೇಗವಾಗಿ ಚಲಾಯಿಸುತ್ತಿದ್ದ ಚಾಲಕ ಕಂಠಪೂರ್ತಿ ಕುಡಿದು ಅಜಾಗರೂಕತೆಯಿಂದ ಕಾರನ್ನು ಚಾಲನೆ ಮಾಡಿರುವುದರಿಂದ, ಚಾಲಕನ ನಿರ್ಲಕ್ಷಕ್ಕೆ ಈ ಅಪಘಾತವಾಗಿದೆ. ಅಷ್ಟೇ ಅಲ್ಲದೆ ಅಲ್ಲಿಂದ ಕಾರಿನ ಚಾಲಕ ಕಾರು ಸಮೇತ ಪರಾರಿಯಾಗಿ ಮುಂದೆ ಬರುವ ಮತ್ತೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ.

ಆ ವೇಳೆಗಾಗಲೇ ಸ್ಥಳೀಯರು ಕಾರನ್ನು ಅಡ್ಡಗಟ್ಟಿ ನಿಲ್ಲಿಸಿ ಯುವಕನು 112 ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ 112 ಪೊಲೀಸರು ಚಾಲಕನನ್ನ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಠಾಣೆಗೆ ಕರೆದೊಯ್ಯಲಾಯಿತು. ಇನ್ನು ಈ ಪ್ರಕರಣ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಿಸಲಾಗಿದೆ.

ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ

Edited By :
PublicNext

PublicNext

26/04/2026 10:12 am

Cinque Terre

13.69 K

Cinque Terre

0