ಯಲ್ಲಾಪುರ: ಬೆಂಗಳೂರಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಕೆಲವು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ್ದ ಘಟನೆಯನ್ನು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ.
ರವಿವಾರ ಪ್ರಕಟಣೆ ಹೊರಡಿಸಿರುವ ಶಾಸಕ ಹೆಬ್ಬಾರ್, ನಮ್ಮ ದೇಶದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಹಕ್ಕನ್ನು ನೀಡಿದೆ ಎಂದು ನೆನಪಿಸಿದರು. ಪರೀಕ್ಷಾ ನಿಯಮಗಳ ನೆಪದಲ್ಲಿ ಯಾವುದೇ ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಧಕ್ಕೆ ತರುವುದು ಖಂಡನೀಯ. ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಭದ್ರತೆ ಮುಖ್ಯವಾದರೂ, ಅದು ವಿದ್ಯಾರ್ಥಿಗಳ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಂಸ್ಕೃತಿಗೆ ಧಕ್ಕೆಯಾಗಬಾರದು ಎಂದು ಸ್ಪಷ್ಟಪಡಿಸಿದರು.
ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಆಗ್ರಹಿಸಿದ್ದಾರೆ.
ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಸರ್ಕಾರ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಬೇಕು. ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಗೌರವ ಮತ್ತು ನ್ಯಾಯ ದೊರಕುವಂತೆ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ. ವಿದ್ಯಾರ್ಥಿಗಳ ಮನೋಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ನಡೆಸುವುದು ಅತ್ಯಾವಶ್ಯಕ ಎಂದು ಶಾಸಕ ಶಿವರಾಮ ಹೆಬ್ಬಾರ್ ಒತ್ತಿ ಹೇಳಿದರು.
Kshetra Samachara
26/04/2026 01:59 pm
LOADING...