ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಅಪ್ರಾಪ್ತನ ಮೇಲಿನ ಹಲ್ಲೆಗೆ ಅಸಲಿ ಕಾರಣ ಬಿಚ್ಚಿಟ್ಟ ಎಸ್ಪಿ ನಿಖಿಲ್

ಶಿವಮೊಗ್ಗ : ಶಿವಮೊಗ್ಗದ ವಾದಿ-ಎ-ಹುದಾ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ 17 ವರ್ಷದ ಅಪ್ರಾಪ್ತನ ಮೇಲೆ 6 ಜನರ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಲೆಯಲ್ಲಿ ಮಚ್ಚು ಸಿಲುಕಿದ ಸ್ಥಿತಿಯಲ್ಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾನೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಮೊಗ್ಗ ಎಸ್ಪಿ ನಿಖಿಲ್, ಮೇಲ್ನೋಟಕ್ಕೆ ಹುಡುಗಿ ವಿಚಾರಕ್ಕೆ ಆರು ಜನರ ಗುಂಪು ಅಪ್ರಾಪ್ತ ಮೇಲೆ ಅಟ್ಯಾಕ್ ಮಾಡಿದೆ.

ಎಲ್ಲರೂ ಕುಡಿದುಕೊಂಡು ಬಂದು ಅಪ್ರಾಪ್ತ ಮೇಲೆ ಅಟ್ಯಾಕ್ ಮಾಡಿದ್ದಾರೆ. ಹುಡುಗಿ ವಿಚಾರಕ್ಕೆ ಗಲಾಟೆ ಆಗಿರೋದು ಎಂದು ತಿಳಿಸಿದ್ದಾರೆ. ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಲ್ಲಾ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ. ತನಿಖೆ ನಂತರ ಮತ್ತಷ್ಟು ಮಾಹಿತಿ ತಿಳಿಯಬೇಕಿದೆ ಎಂದರು.

Edited By :
PublicNext

PublicNext

26/04/2026 02:28 pm

Cinque Terre

13.05 K

Cinque Terre

0

ಸಂಬಂಧಿತ ಸುದ್ದಿ