ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಖಾಸಗಿ ಬಸ್ ಪಲ್ಟಿ ಮದುವೆ ಮುಗಿಸಿ ಬರುತ್ತಿದ್ದ ಹಲವರಿಗೆ ಗಂಭೀರ ಗಾಯ

ಮೂಡಿಗೆರೆ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಮದುವೆ ಸಮಾರಂಭ ಮುಗಿಸಿ ಧರ್ಮಸ್ಥಳದಿಂದ ತುಮಕೂರು ಜಿಲ್ಲೆಯ ಪಾವಗಡಕ್ಕೆ ವಾಪಸ್ಸು ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಘಟನೆ ನಡೆದ ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿದ್ದು, ಆಂಬುಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡವರನ್ನು ಕಕ್ಕಿಂಜೆಯ ಕೃಷ್ಣ ಆಸ್ಪತ್ರೆ ಹಾಗೂ ಬೆಳ್ತಂಗಡಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಣಕಲ್ ಮತ್ತು ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಾರ್ಮಾಡಿ ಘಾಟ್‌ನ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ.

Edited By :
PublicNext

PublicNext

26/04/2026 04:37 pm

Cinque Terre

10.72 K

Cinque Terre

0

ಸಂಬಂಧಿತ ಸುದ್ದಿ