ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯ ಬೃಹತ್ ಜಾಲವೊಂದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ದಾಳಿಯ ವೇಳೆ ಬರೋಬ್ಬರಿ 3,347 ಮೂಟೆ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.
ಕೊಪ್ಪಳ ತಾಲೂಕಿನ ಕುಕನೂಪಳ್ಳಿ ಹೊರವಲಯದಲ್ಲಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮುನಿರಾಬಾದ್ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದರು.
ದಾಳಿಯ ವೇಳೆ ಪತ್ತೆಯಾದ ಅನ್ನಭಾಗ್ಯ ಅಕ್ಕಿಯ ಮೂಟೆಗಳನ್ನು ಆಹಾರ ಇಲಾಖೆಯು ಎಣಿಕೆ ಮಾಡಿದ್ದು, ಒಟ್ಟು 3,347 ಮೂಟೆಗಳು ಇರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಂಡ ಅಕ್ಕಿಯನ್ನು ತಾಲೂಕು ಸಗಟು ಮಳಿಗೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
PublicNext
26/04/2026 05:01 pm
LOADING...