ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಒಂದೇ ದಿನ ಚಾರ್ಮಾಡಿ ಘಾಟಿಯಲ್ಲಿ ಎರಡು ವಾಹನಗಳು ಪಲ್ಟಿ

ಮೂಡಿಗೆರೆ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ ಎಂಟನೇ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಅಶೋಕ್ ಲೈಲ್ಯಾಂಡ್ ದೋಸ್ತ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮವಾಗಿ ವಾಹನದಲ್ಲಿದ್ದವರು ಗಾಯಗೊಂಡಿದ್ದಾರೆ.

ಘಟನೆ ನಡೆದ ಕೂಡಲೇ ಗಾಯಾಳುಗಳನ್ನು ಸಮೀಪದ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನವಷ್ಟೇ ಮದುವೆ ಮುಗಿಸಿ ವಾಪಸ್ ಆಗುತ್ತಿದ್ದ ಖಾಸಗಿ ಬಸ್ ಘಾಟಿಯ ನಾಲ್ಕನೇ ತಿರುವಿನಲ್ಲಿ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದರು ಇದರ ನಡುವೆ ಮತ್ತೊಂದು ವಾಹನ ಪಲ್ಟಿಯಾಗಿರುವುದು ಘಾಟ್ ರಸ್ತೆಯಲ್ಲಿ ಎಚ್ಚರಿಕೆಯ ಚಾಲನೆ ಅಗತ್ಯವಾಗಿದೆ.

Edited By : PublicNext Desk
Kshetra Samachara

Kshetra Samachara

26/04/2026 06:11 pm

Cinque Terre

2.4 K

Cinque Terre

0

ಸಂಬಂಧಿತ ಸುದ್ದಿ