ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಭೀಕರ ಅಪಘಾತ; ಗಾಯಾಳು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ ಶಾಸಕಿ ನಯನಾ ಮೋಟಮ್ಮ

​ಮೂಡಿಗೆರೆ: ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರ ಜೀವ ಉಳಿಸಲು ಶಾಸಕಿ ನಯನಾ ಮೋಟಮ್ಮ ಅವರು ಸಮಯಪ್ರಜ್ಞೆ ಮೆರೆದು ಮಾನವೀಯತೆ ಪ್ರದರ್ಶಿಸಿದ್ದಾರೆ.

ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಯುವಕರು ತೀವ್ರ ರಕ್ತಸ್ರಾವಕ್ಕೊಳಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು.

​ಅದೇ ಸಮಯದಲ್ಲಿ ಹೊರನಾಡಿನಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಶಾಸಕಿ ನಯನಾ ಮೋಟಮ್ಮ ಅವರು ಅಪಘಾತವನ್ನು ಕಂಡು ಕೂಡಲೇ ವಾಹನ ನಿಲ್ಲಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು, ಕ್ಷಣವೂ ತಡಮಾಡದೆ ತಮ್ಮ ಅಂಗರಕ್ಷಕರ ಸಹಾಯದಿಂದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಹತ್ತಿಸಿಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ.

​ಗಾಯಾಳುಗಳನ್ನು ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯಿತು. ಗಾಯಾಳುಗಳ ಮೈಯಿಂದ ಅತಿಯಾದ ರಕ್ತಸ್ರಾವವಾಗುತ್ತಿದ್ದ ಕಾರಣ ಶಾಸಕರ ಅಧಿಕೃತ ಕಾರು ಸಂಪೂರ್ಣ ರಕ್ತಮಯವಾಗಿತ್ತು. ಆದರೂ ಶಿಷ್ಟಾಚಾರ (Protocol) ಅಥವಾ ವಾಹನದ ಬಗ್ಗೆ ಯೋಚಿಸದೆ, ಜೀವ ಉಳಿಸುವುದೇ ಮುಖ್ಯ ಎಂದು ಶಾಸಕರು ತೋರಿದ ಈ ಕಾಳಜಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

​ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಕಷ್ಟದ ಸಮಯದಲ್ಲಿ ಶಾಸಕಿ ತೋರಿದ ಸಮಯಪ್ರಜ್ಞೆ ಮತ್ತು ಮಾನವೀಯ ಗುಣಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

Edited By : Manjunath H D
PublicNext

PublicNext

26/04/2026 08:27 pm

Cinque Terre

19.73 K

Cinque Terre

1

ಸಂಬಂಧಿತ ಸುದ್ದಿ