ರಾಯಚೂರು: ಸಿಎಂ ಸಿದ್ದರಾಮಯ್ಯ ವೀಕ್ ಆಗಿದ್ದಾರೆ ಅನ್ನೋ ವಿಚಾರಕ್ಕೆ ಸಂಬಂಧಪಟ್ಟಂತೆ ರಾಯಚೂರಿನಲ್ಲಿ ಇಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಿಎಂ ವೀಕ್ ಆಗಿದ್ದಾರೆ ಅಂತ ಯಾರು ಹೇಳ್ತಾರೆ, ಅದಕ್ಕೇ ಏನ್ ಕಾರಣ.? ಸಿಎಂ ಅಂತೂ ಅಡ್ಮಿನಿಸ್ಟ್ರೇಶನ್ ಚೆನ್ನಾಗಿ ಕೊಡ್ತಿದ್ದಾರೆ. ಏನೇ ಸಮಸ್ಯೆಗಳಿದ್ದರೂ ಒಂದೊಂದಾಗಿ ಬಗೆಹರಿಸುತ್ತಿದ್ದಾರೆ.
ಒಳಮೀಸಲಾತಿ ಸಮಸ್ಯೆ ಬಗೆಹರಿಸಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ನಿಶ್ಯಕ್ತರಾಗಿಲ್ಲ ಎಂದಿದ್ದಾರೆ. ಇದೇ ವೇಳೆ ಸಿಎಂ ಬಣದ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿ ಹುದ್ದೆಯಿಂದ ಕೆಳಗೆ ಇಳಿಸಲಾಗುತ್ತಿದೆ ಅನ್ನೋ ವಿಪಕ್ಷ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ, ನಮ್ಮ ಪಕ್ಷದ ವಿಚಾರ ವಿರೋಧ ಪಕ್ಷದವರಿಗೆ ಏನು ಗೊತ್ತಿರುತ್ತೆ.
ಪಕ್ಷದ ವರಿಷ್ಠರಿಗೆ ಮಾಹಿತಿ ಇರುತ್ತೆ. ಮಾಹಿತಿ ಆಧಾರದ ಮೇಲೆ ನಿರ್ಧಾರ ತಗೊಂಡಿರುತ್ತಾರೆ. ನಮ್ಮ ಪಕ್ಷದ ಆಂತರಿಕ ವಿಚಾರ ಅವರಿಗೆ ಗೊತ್ತಿರುವುದಿಲ್ಲ, ಗೊತ್ತಿಲ್ಲದೇ ಬೇಕಾಬಿಟ್ಟಿಯಾಗಿ ಮಾತನಾಡಬಾರದು ಎಂದರು.
PublicNext
26/04/2026 10:37 pm
LOADING...