ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

​ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಮಧು ಗುಳೇದ (19) ಮತ್ತು ತರುಣ (13) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಸವಾರ ಸಂತೋಷ ಗುಳೇದ್ (40) ಅವರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

​ಇವರೆಲ್ಲರೂ ಗುಡ್ಡದಚನ್ನಾಪುರ ಗ್ರಾಮದಿಂದ ರಾಣೆಬೆನ್ನೂರು ತಾಲೂಕಿನ ಮಲಕನಹಳ್ಳಿ ಗ್ರಾಮಕ್ಕೆ ವಾಪಸ್ ಹೊರಟಿದ್ದ ವೇಳೆ ಈ ಅಪಘಾತ ನಡೆದಿದೆ. ಡಿಕ್ಕಿ ಹೊಡೆದ ಅಪರಿಚಿತ ವಾಹನವು ನಿಲ್ಲಿಸದೆ ಪರಾರಿಯಾಗಿದೆ.​ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆ ಹಚ್ಚಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೃತರ ಕುಟುಂಬಸ್ಥರು ಆಗ್ರಹಿಸಿದ್ದಾರೆ.

Edited By : Manjunath H D
PublicNext

PublicNext

26/04/2026 10:43 pm

Cinque Terre

21.62 K

Cinque Terre

0

ಸಂಬಂಧಿತ ಸುದ್ದಿ