ಚಿತ್ರದುರ್ಗ: ಇಂದಿನ ಯುವ ರಾಜಕಾರಣಿಗಳಿಗೆ ಹಾಗೂ ಯುವ ಪೀಳಿಗೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಾರಿ ದೀಪವಾಗಿದ್ದಾರೆ. ಅವರ 50 ವರ್ಷದ ರಾಜಕೀಯ ಜೀವನ ಬೇರೆಯವರಿಗೆ ಮಾರ್ಗದರ್ಶನ ಆಗಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 50 ವರ್ಷದ ರಾಜಕೀಯ ಜೀವನದ ಹಿನ್ನಲೆಯಲ್ಲಿ ಮೇ. 9 ರಂದು ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ಅಭಿಮಾನೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಭೂಮಿ ಪೂಜೆ ಧ್ವಜಾರೋಹನ ಹಾಗೂ ಗೋ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಯಡಿಯೂರಪ್ಪರವರೆಂದರೆ ರಾಜ್ಯದಲ್ಲಿ ಹೋರಾಟವನ್ನು ನಡೆಸುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಿಎಸ್.ವೈ ಎಂದರೆ ಹೋರಾಟ ಎಂಬ ಮನೋಭಾವ ಎಲ್ಲರಲ್ಲೂ ಸಹ ಮೂಡಿದೆ. ಛಲಕ್ಕೆ ಮತ್ತೊಂದು ಹೆಸರೇ ಯಡಿಯೂರಪ್ಪ ಎನ್ನಬಹುದಾಗಿದೆ. ಜನ ಸೇವೆಗಾಗಿಯೇ ತಮ್ಮ ಜೀವನವನ್ನೇ ಮುಡುಪಾಗಿ ಇಟ್ಟಿದ್ದಾರೆ. ದಲಿತರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರಿಗೆ ಧ್ವನಿಯಾಗಿ ಕೆಲಸವನ್ನು ಮಾಡಿದ್ದಾರೆ. ಅಧಿಕಾರಕ್ಕಾಗಿ ಎಂದು ಸಹ ಹೋರಾಟವನ್ನು ಮಾಡಲಿಲ್ಲ, ಬಡವರ ಕಣ್ಣೀರನ್ನು ಒರೆಸುವ ಸಲುವಾಗಿ ಕೆಲಸವನ್ನು ಮಾಡಿದ್ದಾರೆ 50 ವರ್ಷ ಬಡವರ ಪರವಾಗಿ ಕೆಲಸವನ್ನು ಮಾಡಿದ್ದಾರೆ. ಸೈಕಲ್ ಮೇಲೆ ರಾಜ್ಯ ಪ್ರವಾಸ ಮಾಡಿ, ಪಕ್ಷವನ್ನು ಕಟ್ಟಿ ಬೆಳೆಸಿದ ಅವರ ಹೋರಾಟ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದರು.
PublicNext
27/04/2026 07:54 am
LOADING...