ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಪಿಜಿ ಪಾಳ್ಯ ಸಫಾರಿ ಪ್ರದೇಶದಲ್ಲಿ ಕಪ್ಪು ಚಿರತೆ ದರ್ಶನ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿಜಿಪಾಳ್ಯ ಸಫಾರಿ ಪ್ರದೇಶದಲ್ಲಿ ಕಪ್ಪು ಚಿರತೆ ಪ್ರತ್ಯಕ್ಷವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿಜಿ ಪಾಳ್ಯ ಸಫಾರಿ ವೇಳೆ ಕಾಡಿನೊಳಗೆ ಚಲಿಸುತ್ತಿದ್ದ ಕರಿ ಚಿರತೆಯನ್ನು ಸಫಾರಿಗೆ ತೆರಳಿದ ಪ್ರವಾಸಿಗರು ಮತ್ತು ಸಿಬ್ಬಂದಿ ಗಮನಿಸಿದ್ದು, ಕೆಲಕಾಲ ಅದು ಅರಣ್ಯ ಪ್ರದೇಶದಲ್ಲಿ ಸಂಚರಿಸಿ ನಂತರ ದಟ್ಟ ಕಾಡಿನೊಳಗೆ ಮರೆಯಾಗಿದೆ ಎಂದು ತಿಳಿದು ಬಂದಿದೆ.

ಈ ಅಪರೂಪದ ಪ್ರಾಣಿಯ ದೃಶ್ಯಾವಳಿಯನ್ನು ಪ್ರವಾಸಿಗರು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಪ್ರವಾಸಿಗರಲ್ಲಿ ಕುತೂಹಲ ಮತ್ತು ಆನಂದವನ್ನು ಮೂಡಿಸಿದ್ದು, ವನ್ಯಜೀವಿ ಪ್ರೇಮಿಗಳ ಗಮನ ಸೆಳೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಈ ಪ್ರದೇಶದಲ್ಲಿ ನಿಗಾವಹಿಸಿ ಹೆಚ್ಚಿಸಿದ್ದು, ಪ್ರವಾಸಿಗರು ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ.

Edited By :
Kshetra Samachara

Kshetra Samachara

27/04/2026 11:55 am

Cinque Terre

380

Cinque Terre

0

ಸಂಬಂಧಿತ ಸುದ್ದಿ