ಧಾರವಾಡ: ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲ ಸೌಕರ್ಯ ಮಿಷನ್ (ಪಿ.ಎಂ.ಅಭಿಮ್) ಅಡಿಯಲ್ಲಿ ಧಾರವಾಡ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ನಿರ್ಮಿಸಿದ ಧಾರವಾಡ ಜಿಲ್ಲೆಯ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಲೋಕಾರ್ಪಣೆಗೊಳಿಸಿದರು.
ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಆಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎಂಜಿನಿಯರಿಂಗ್ ವಿಭಾಗ ವತಿಯಿಂದ ಈ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆರೋಗ್ಯ ತಪಾಸಣೆಯ ಅತ್ಯಾಧುನಿಕ ಯಂತ್ರಗಳನ್ನು ಈ ಪ್ರಯೋಗಾಲಯಕ್ಕೆ ನೀಡಲಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಪ್ರಯೋಗಾಲವನ್ನು ನಿರ್ಮಿಸಿ ಲೋಕಾರ್ಪಣೆಗಳಿಸಿವೆ.
ಶಾಸಕರಾದ ಅರವಿಂದ ಬೆಲ್ಲದ, ಎನ್.ಎಚ್.ಕೋನರಡ್ಡಿ, ಎಚ್.ಎಫ್.ಜಕ್ಕಪನವರ, ಜಿಲ್ಲಾಧಿಕಾರಿ ಆರ್.ಸ್ನೇಹಲ್ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/04/2026 02:02 pm
LOADING...