ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು : ನೆಟ್ ವರ್ಕ್ ಸಮಸ್ಯೆ ಸರಿಪಡಿಸಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ

ನಾಪೋಕ್ಲು: ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಲಮಾವಟಿ, ಪುಲಿಕೋಟು ಮತ್ತು ಪೇರೂರು ಗ್ರಾಮಗಳಲ್ಲಿ ನೆಟ್ ವರ್ಕ್ ಸಮಸ್ಯೆ ಕಾಡುತ್ತಿದ್ದು ಗ್ರಾಮಸ್ಥರು ಸಮಸ್ಯೆ ಎದುರಿಸುವಂತಾಗಿದೆ ಸಮಸ್ಯೆ ಯನ್ನು ಕೂಡಲೇ ಸರಿಪಡಿಸಬೇಕು ತಪ್ಪಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಪುಲಿಕೋಟು ಗ್ರಾಮದ ಕಾಫಿ ಬೆಳೆಗಾರ ಮಣವಟ್ಟಿರ ದಯಾ ಚಿಣ್ಣಪ್ಪ ಎಚ್ಚರಿಸಿದ್ದಾರೆ.

ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು ವಿವಿಧ ವರ್ಗದ ಜನರಿಗೆ ನೆಟ್ ವರ್ಕ್ ಸಮಸ್ಯೆ ಕಾಡುತ್ತಿದೆ. ವಿದ್ಯಾರ್ಥಿಗಳು ,ಯುವಜನರು ಕೆಲಸ ನಿರ್ವಹಿಸಲು ಓದಲು ಸಮಸ್ಯೆ ಯಾಗಿದೆ. ಬಲ್ಲಮಾವಟಿ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಇದೆ .ಇಲ್ಲೂ ಜನಸಾಮಾನ್ಯರು ದೈನಂದಿನ ವ್ಯವಹಾರಗಳಿಗೆ ನಿಲ್ಲುವ ಪರಿಸ್ಥಿತಿ ಬಂದಿದೆ. ಪಡಿತರ ಪಡೆಯಲು ಸಹ ನೆಟ್ ವರ್ಕ್ ಸಮಸ್ಯೆಯಿಂದಾಗಿ ತೊಂದರೆಯಾಗುತ್ತಿದೆ. ಕೂಡಲೇ ಸಮಸ್ಯೆ ಬಗೆಹರಿಸ ಬಳಕೆದಾರರಿಗೆ ನೆಟ್ ವರ್ಕ್ ಪೂರೈಸುವಲ್ಲಿ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದುರು

Edited By : PublicNext Desk
Kshetra Samachara

Kshetra Samachara

27/04/2026 06:30 pm

Cinque Terre

360

Cinque Terre

0