ಶಿರಸಿ: ಇಂದು ಶಿರಸಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆದ ಕಾಲೇಜು ಅಭಿವೃದ್ಧಿ ಸಮಿತಿ (CDC) ಸಭೆಯಲ್ಲಿ ಶಾಸಕ ಭೀಮಣ್ಣ ಟಿ. ನಾಯ್ಕ ಪಾಲ್ಗೊಂಡರು.
ಕಾಲೇಜಿನ ಶೈಕ್ಷಣಿಕ ಪ್ರಗತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ಕುರಿತು ಶಾಸಕರು ಸುದೀರ್ಘ ಚರ್ಚೆ ನಡೆಸಿದರು.
ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ದೊಡ್ಡದು ಎಂದು ಆಶಯ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೇಕಾದ ಗ್ರಂಥಾಲಯ, ಪ್ರಯೋಗಾಲಯ ಹಾಗೂ ಕೊಠಡಿಗಳ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು, ಅಗತ್ಯ ಸುಧಾರಣೆಗಳನ್ನು ತರುವ ಭರವಸೆ ನೀಡಿದರು.
"ಶಿಕ್ಷಣ ಸಂಸ್ಥೆಗಳು ಸಮಾಜದ ಕನ್ನಡಿ ಇದ್ದಂತೆ. ಸರ್ಕಾರಿ ಕಾಲೇಜಿನ ಗುಣಮಟ್ಟವನ್ನು ಹೆಚ್ಚಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಸದಸ್ಯರು, ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Kshetra Samachara
27/04/2026 07:18 pm
LOADING...