ಶಿವಮೊಗ್ಗ : ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯಿಂದಾಗಿ ರೈತರ ಬೆಳೆ ಹಾನಿ, ಮನೆಗಳ ಮೇಲ್ಛಾವಣಿ ಕುಸಿತ ಹಾಗೂ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.
ಸಂಸದ ಬಿ.ವೈ.ರಾಘವೇಂದ್ರ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭದ್ರಾವತಿ ಅರತೊಳಲು, ವಡ್ಡರಹಟ್ಟಿ, ಮಲ್ಲಾಪುರ, ಮಲ್ಲಿಗೆನಹಳ್ಳಿ ಗ್ರಾಮಗಳಿಗೆ ಭೇಟಿ ಪರಿಶೀಲನೆ ನಡೆಸಿದರು. ಮಳೆಯಿಂದ ಹಾನಿಗೊಳಗಾದ ಬೆಳೆ ಮತ್ತು ಮನೆಗಳ ಬಗ್ಗೆ ತಕ್ಷಣವೇ ಜಂಟಿ ಸಮೀಕ್ಷೆ ನಡೆಸಿ, ಸಂತ್ರಸ್ತರಿಗೆ ವಿಳಂಬವಿಲ್ಲದೆ ಗರಿಷ್ಠ ಪರಿಹಾರ ದೊರಕಿಸಿಕೊಡಬೇಕು.
ವಿದ್ಯುತ್ ವ್ಯತ್ಯಯದಿಂದ ಸಾರ್ವಜನಿಕರು ಮತ್ತು ರೈತರು ಅನುಭವಿಸುತ್ತಿರುವ ತೊಂದರೆಯನ್ನು ನಿವಾರಿಸಲು ಮೆಸ್ಕಾಂ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸಬೇಕು. ರಸ್ತೆಗಳಲ್ಲಿ ಬಿದ್ದಿರುವ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.
PublicNext
27/04/2026 08:31 pm
LOADING...