ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಸಚಿವರ ಸಮ್ಮುಖದಲ್ಲೇ ನೂಕಾಟ - ಆಸ್ಪತ್ರೆ ಉದ್ಘಾಟನೆಯಲ್ಲಿ ರಾಜಕೀಯ ಕೆಸರೆರೆಚಾಟ!

ಹಾವೇರಿ: ಶಿಗ್ಗಾಂವಿ ತಾಲೂಕಾಸ್ಪತ್ರೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಉದ್ಘಾಟನೆಗೂ ಮುನ್ನವೇ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿಯೇ ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕೈ ಮಿಲಾಯಿಸಿ ತಳ್ಳಾಟ ನೂಕಾಟ ನಡೆಸಿದರು.

ಸಚಿವರ ಮುಂದೆಯೇ ಘರ್ಷಣೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಟ್ಟಡವನ್ನು ಉದ್ಘಾಟಿಸಿ ಒಳಗೆ ತೆರಳಿದ ಕೂಡಲೇ, ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಜೈಕಾರ ಕೂಗುತ್ತಾ ಪರಸ್ಪರ ಕೆಣಕಲು ಆರಂಭಿಸಿದರು. ಇದು ನಿಧಾನವಾಗಿ ತಳ್ಳಾಟ-ನೂಕಾಟಕ್ಕೆ ತಿರುಗಿ, ಕಾರ್ಯಕ್ರಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಪೊಲೀಸರಿಂದ ಪರಿಸ್ಥಿತಿ ನಿಯಂತ್ರಣ

ಪರಿಸ್ಥಿತಿ ಕೈಮೀರುವುದನ್ನು ಅರಿತ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಮಧ್ಯಪ್ರವೇಶಿಸಿದರು. ಗಲಾಟೆಯಲ್ಲಿ ತೊಡಗಿದ್ದ ಉಭಯ ಪಕ್ಷಗಳ ಕಾರ್ಯಕರ್ತರನ್ನು ಸಮಾಧಾನಪಡಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಬಿಗುವಿನ ವಾತಾವರಣ ತಿಳಿಗೊಂಡು, ಕಾರ್ಯಕ್ರಮ ಮತ್ತೆ ಸಹಜ ಸ್ಥಿತಿಗೆ ಮರಳಿತು.

Edited By : Vinayak Patil
PublicNext

PublicNext

27/04/2026 10:42 pm

Cinque Terre

19.49 K

Cinque Terre

0

ಸಂಬಂಧಿತ ಸುದ್ದಿ