ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ನಗರದ ಅಭಿವೃದ್ಧಿ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಚನ್ನಬಸಪ್ಪ

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ನಗರಾದ್ಯಂತ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯದ ಪ್ರಗತಿಯನ್ನು ಪರಿಶೀಲಿಸಲಾಯಿತು. ಬಾಕಿ ಇರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕೂಡಲೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ವರದಿ ನೀಡಲು ಶಾಸಕ ಚನ್ನಬಸಪ್ಪ ಸೂಚನೆ ನೀಡಿದರು.

ಮುಂಬರುವ ಮಳೆಗಾಲದ ಹಿನ್ನೆಲೆಯಲ್ಲಿ ರಾಜಕಾಲುವೆಗಳ ಹೂಳು ತೆಗೆಯುವುದು ಸೇರಿದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದರು.ಮಳೆ ಹಾನಿ ಪ್ರದೇಶಗಳ ವೀಕ್ಷಣೆ ಮತ್ತು ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕರ್ತವ್ಯ ಲೋಪವಾದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ವಿವಿಧೆಡೆ ಇರುವ ಕನ್ಸರ್ವೆನ್ಸಿ ರಸ್ತೆಗಳನ್ನು ತುರ್ತಾಗಿ ಅಭಿವೃದ್ಧಿಪಡಿಸಿ, ಅವುಗಳನ್ನು ವ್ಯವಸ್ಥಿತ ವಾಹನ ಪಾರ್ಕಿಂಗ್‌ಗಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಪಾಲಿಕೆಯ ವಿದ್ಯುತ್ ವಿಭಾಗದ ಅಧಿಕಾರಿಗಳು ಪ್ರತಿದಿನ ವಾರ್ಡ್‌ಗಳಲ್ಲಿ ಸಂಚರಿಸಿ ಬೀದಿ ದೀಪಗಳ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸಬೇಕು. ನಿರ್ವಹಣೆಯಲ್ಲಿ ವಿಫಲರಾದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಲಾಯಿತು.

ಅಮೃತ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಕೆರೆ ಹಾಗೂ ಉದ್ಯಾನವನಗಳ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಯ ವಿವರ ಪಡೆಯಲಾಯಿತು.ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/04/2026 08:09 am

Cinque Terre

2.08 K

Cinque Terre

0

ಸಂಬಂಧಿತ ಸುದ್ದಿ