ಶಿವಮೊಗ್ಗ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಟಾಟಾ ಏಸ್ ವಾಹನ ಡಿಕ್ಕಿಯಾದ ಪರಿಣಾಮ, ಆಸ್ಪತ್ರೆಗೆ ಸಾಗಿಸುವ ವೇಳೆ ವ್ಯಕ್ತಿ ಮೃತ ಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಮುಡುಬ ಗ್ರಾಮದಲ್ಲಿ ನಡೆದಿದೆ.
ಮುಡುಬ ಗ್ರಾಮದ ಆಶೀರ್ವಾದ ಹೋಟೆಲ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ದಾನಪ್ಪ(57) ಎಂಬಾತನಿಗೆ, ಬಟ್ಟೆಮಲ್ಲಪ್ಪ ಕಡೆಯಿಂದ ಅತಿ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿಯಾಗಿದೆ. ಕೂಡಲೇ ದಾನಪ್ಪ ಅವರನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯ ಸಾವನಪ್ಪಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
28/04/2026 09:00 am
LOADING...