ಕೋಲಾರ: ಕೋಲಾರ ಜಿಲ್ಲೆಯಲ್ಲಿ ಸೋಮವಾರ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಮೂಲಕ ಈ ವರ್ಷದ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ 35 ರಿಂದ 36 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದ ತಾಪಮಾನವು, ಕೋಲಾರ, ಶ್ರೀನಿವಾಸಪುರ ಸೇರಿದಂತೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ 37 ಡಿಗ್ರಿಗೆ ಏರಿಕೆಯಾಗಿದೆ.
ಮುಂದಿನ ಎರಡು ದಿನಗಳ ಕಾಲ ಇದೇ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರೆಯುವ ಸಾಧ್ಯತೆಯಿದ್ದು, ನಂತರ ಉಷ್ಣಾಂಶದಲ್ಲಿ ಇಳಿಕೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುಡುಬಿಸಿಲಿಗೆ ಸಾರ್ವಜನಿಕರ ಪರದಾಟ
ಈ ಸುಡು ಬಿಸಿಲಿನಿಂದ ಸಾರ್ವಜನಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ವಿಶೇಷವಾಗಿ ಕೂಲಿ ಕಾರ್ಮಿಕರು ಮಧ್ಯಾಹ್ನದ ವೇಳೆ ಕೆಲಸ ಮಾಡಲು ಸಾಧ್ಯವಾಗದೆ ಮನೆಯಲ್ಲೇ ಕಾಲ ಕಳೆಯುವಂತಾಗಿದೆ. ಬಿಸಿಲಿನ ತಾಪದಿಂದಾಗಿ ದೈನಂದಿನ ಚಟುವಟಿಕೆಗಳಿಗೂ ಅಡ್ಡಿಯುಂಟಾಗಿದೆ.
PublicNext
28/04/2026 09:18 am