ಮೈಸೂರು: ಗ್ಯಾಸ್ ಸಿಲಿಂಡರ್ ಅಭಾವದಿಂದ ಸರಿಯಾದ ಸಮಯಕ್ಕೆ ಗ್ಯಾಸ್ ಸಿಗದೆ ಮಹಿಳೆಯೊಬ್ಬರು ಗ್ಯಾಸ್ ಸಿಲಿಂಡರ್ ಅನ್ನು ತಲೆ ಮೇಲೆ ಹೊತ್ತುಕೊಂಡು 2.5 ಕಿಲೋ ಮೀಟರ್ ನಡೆದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ.
ನಿಗದಿತ ಸಮಯಕ್ಕೆ ಗ್ಯಾಸ್ ಸಿಲಿಂಡರ್ ಸಿಗದ ಕಾರಣ ಕಳಲೆ ಗ್ರಾಮದಿಂದ ಕಳಲೆ ಗೇಟ್ ವರೆಗೆ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಮಹಿಳೆ ನಡೆದಿದ್ದಾರೆ
ಮಹಿಳೆ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಸಾಗುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.
PublicNext
28/04/2026 11:28 am
LOADING...