ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಅಕ್ರಮ ದಂಧೆಗೆ ಬ್ರೇಕ್‌, ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಶಿವಮೊಗ್ಗ : ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನಲೆ ಅಕ್ರಮ ಚಟುವಟಿಕೆ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದೆ. ಎಸ್ಪಿ ನಿಖಿಲ್ ಅವರ ಖಡಕ್ ಸೂಚನೆ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸರು ಡ್ರೋಣ್ ಹಾರಿಸಿ 19 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಭದ್ರಾವತಿ ತಾಲೂಕಿನ ಕೂಡ್ಲಿಗೆರೆಯ ಅರಣ್ಯ ಪ್ರದೇಶಗಳಲ್ಲಿ ಡ್ರೋಣ್ ಹಾರಿವೆ. ಈಗ ಭದ್ರಾವತಿಯ ಕೂಡ್ಲಿಗೆರೆಯಲ್ಲಿ ಡ್ರೋಣ್ ಹಾರಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ 19 ಜನರ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಮಲ್ಲಾಪುರ, ಕಲ್ಲಿಹಾಳ್ ತಟ್ಟೆಹಳ್ಳಿ ಭಾಗದಲ್ಲಿ ಹಗಲು ರಾತ್ರಿ ತೂರಬಿಲ್ಲೆ ಆಟ ನಡೆಯುತ್ತದೆ ಎಂಬುದರ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಡ್ರೋಣ್ ಹಾರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Edited By :
PublicNext

PublicNext

28/04/2026 12:31 pm

Cinque Terre

7.89 K

Cinque Terre

0

ಸಂಬಂಧಿತ ಸುದ್ದಿ