ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರ: ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಶಾಸಕ ಭೀಮಣ್ಣ ನಾಯ್ಕ್

ಸಿದ್ದಾಪುರ: ಸಾಕು ನಾಯಿಗಳು ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ಕಚ್ಚುವುದು, ಓಡಾಟಕ್ಕೆ ಭಯ ಹುಟ್ಟಿಸುವುದು ಅಥವಾ ಯಾವುದೇ ತೊಂದರೆ ಉಂಟುಮಾಡಿದರೆ, ಅದಕ್ಕೆ ನಾಯಿಗಳ ಮಾಲೀಕರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ ಎಂದು ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದ್ದಾರೆ.

ಸಿದ್ದಾಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅವರು ಈ ಕುರಿತು ಮಾತನಾಡಿದರು. ಎಲ್ಲಾ ಪಂಚಾಯಿತಿಗಳಲ್ಲಿ ಪಿಡಿಒಗಳು ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಅಲ್ಲದೆ, ಸಾಕು ನಾಯಿಗಳನ್ನು ಹೊರತುಪಡಿಸಿ, ಬೀದಿ ನಾಯಿಗಳನ್ನು ಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸೂಚನೆ ನೀಡಿದರು.

ಸಭೆಯಲ್ಲಿ ನಾಯಿ ಹಾವಳಿ ಕುರಿತು ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಯಿತು. ತಾಲೂಕಿನಲ್ಲಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಜನರಿಗೆ ನಿರಂತರ ತೊಂದರೆಯಾಗುತ್ತಿದೆ. ಹಲವು ವರ್ಷಗಳಿಂದ ಅಧಿಕಾರಿಗಳು ಈ ಬಗ್ಗೆ 'ಹಾರಿಕೆ ಉತ್ತರ' ನೀಡುತ್ತಿದ್ದು, ಕೂಡಲೇ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ನಾಯಿಗಳಿಂದ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಸಭೆಯಲ್ಲಿ ಕೃಷಿ, ಆರೋಗ್ಯ, ತೋಟಗಾರಿಕೆ, ಪಶು ಸಂಗೋಪನೆ, ಹೆಸ್ಕಾಂ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಇಒ ಎಂ.ಆರ್. ಕುಲಕರ್ಣಿ, ಡಿಡಿಪಿಐ ದೇವರಾಜ್ ಹಿತ್ಲಕೊಪ್ಪ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/04/2026 03:35 pm

Cinque Terre

3.66 K

Cinque Terre

0

ಸಂಬಂಧಿತ ಸುದ್ದಿ