ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ: ಎಸಳೂರಿನ ಬೃಹನ್ಮಠದಲ್ಲಿ ಏಪ್ರಿಲ್ 29ರಂದು ಭವ್ಯ ಮಹೋತ್ಸವ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಸಳೂರು ಗ್ರಾಮದಲ್ಲಿರುವ ಶ್ರೀ ತೆಂಕಲಗೂಡು ಬೃಹನ್ಮಠದಲ್ಲಿ ವಾಗ್ಭೂಷಣ ರತ್ನ ಲಿಂಗೈಕ್ಯ ಷ.ಬ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳವರ 6ನೇ ವರ್ಷದ ಪುಣ್ಯಸ್ಮರಣೆ ಹಾಗೂ ಶ್ರೀ ಷ.ಬ್ರ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳವರ 6ನೇ ವರ್ಷದ ಗುರು ಪಟ್ಟಾಧಿಕಾರ ವರ್ಧಂತಿ ಮಹೋತ್ಸವವನ್ನು ಏಪ್ರಿಲ್ 29ರಂದು ಭಕ್ತಿಭಾವದಿಂದ ಆಚರಿಸಲಾಗುವುದು.

ಈ ಕುರಿತು ಮಠದ ಮಠಾಧ್ಯಕ್ಷರಾದ ಶ್ರೀ ಷ.ಬ್ರ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಂಚಪೀಠಗಳಲ್ಲಿ ಒಂದಾದ ಶ್ರೀಮದ್ ಕಾಶಿ ಜ್ಞಾನ ಸಿಂಹಾಸನದೀಶ್ವರ 1008 ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದಂಗಳವರು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಶ್ರೀಮದ್ ಕಾಶಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ, ವೀರಶೈವ ಪಂಚಸೂತ್ರೀಯ ಪ್ರವಚನ, ‘ವೀರಶೈವ ಪದದರ್ಶನ’ ಹಾಗೂ ‘ಸಿದ್ಧಾಂತ ಶಿಖಾಮಣಿ ಪ್ರಭೇ’ ಗ್ರಂಥಗಳ ಲೋಕಾರ್ಪಣೆ ನಡೆಯಲಿದೆ. ಜೊತೆಗೆ ಶಿವ ದೀಕ್ಷಾ ಕಾರ್ಯಕ್ರಮವೂ ನೆರವೇರಲಿದೆ.

ಪರಮಪೂಜ್ಯ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳವರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಕೂಡ ಆಯೋಜಿಸಲಾಗಿದೆ.

ಇಷ್ಟಲಿಂಗ ಮಹಾಪೂಜೆ ಬಳಿಕ ಮಹಾಸನ್ನಿಧಿಯವರ ಸಾನಿಧ್ಯದಲ್ಲಿ ‘ಸಿದ್ಧಾಂತ ಶಿಖಾಮಣಿ’ ಪ್ರವಚನ ಕಾರ್ಯಕ್ರಮ ನಡೆಯಲಿದೆ. ಈ ಮಹೋತ್ಸವದ ಸದುಪಯೋಗವನ್ನು ಎಲ್ಲ ಸದ್ಭಕ್ತರು ಪಡೆದುಕೊಳ್ಳುವಂತೆ ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮನವಿ ಮಾಡಿದರು.

Edited By : Somashekar
PublicNext

PublicNext

28/04/2026 04:53 pm

Cinque Terre

9.59 K

Cinque Terre

0